೨೧ ೦೮ ೨೦೨೪ ಮೈಸೂರು ದಸರಾ ಗಜ ಪಯಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ಮೊದಲ ಹಂತದಲ್ಲಿ ೯ ಆನೆಗಳ ಆಗಮನ
NIKHIL DV Creation NIKHIL DV Creation
929 subscribers
165 views
11

 Published On Aug 23, 2024

೨೧/೦೮/೨೦೨೪- ಮೈಸೂರು - ದಸರಾ ಗಜ ಪಯಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ..ಮೊದಲ ಹಂತದಲ್ಲಿ ೯ ಆನೆಗಳ ಆಗಮನ.... ೨೦೨೪ರ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಇಂದು ಮೊದಲ ಹಂತದ ೯ ದಸರಾ ಆನೆಗಳ ಗಜ ಪಯಣಕ್ಕೆ ವೀರನಹೊಸಹಳ್ಳಿ ಬಳಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪನರವರು ಅಧಿಕೃತವಾಗಿ ಚಾಲನೆ ನೀಡಿದರು....ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ,ಹಾಡಿ ಜನರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು,ವೀರಗಾಸೆ ನೃತ್ಯ,ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು....ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್‌ಗೌಡ ವಹಿಸಿದ್ದರು....ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ,ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್,ಅರಣ್ಯ ವಸತಿ ಧಾಮಗಳ ಅಧ್ಯಕ್ಷರು ಹಾಗೂ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು,ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುನಿಲ್ ಬೋಸ್,ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್,ಕೆ.ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ದೊಡ್ಡ ಹೆಜ್ಜುರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಂಬಿಕಾ,ಮುಡಾ ಅಧ್ಯಕ್ಷರಾದ ಕೆ.ಮರೀಗೌಡರವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು....... ದಸರಾ ಗಜ ಪಯಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಮೊದಲ ಹಂತದಲ್ಲಿ 9 ಆನೆಗಳ ಆಗಮನ

ಮೈಸೂರು ಆಗಸ್ಟ್ 21

2024ರ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಇಂದು ಮೊದಲ ಹಂತದ 9 ದಸರಾ ಆನೆಗಳ ಗಜ ಪಯಣಕ್ಕೆ ವೀರನಹೊಸಹಳ್ಳಿ ಬಳಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪ,ರವರು ಅಧಿಕೃತವಾಗಿ ಚಾಲನೆ ನೀಡಿದರು.

ವಿವಿಧ ಪೂಜಾ ಕೈಂಕರ್ಯ ಗಳನ್ನು ನೆರವೇರಿಸಿ,ಹಾಡಿ ಜನರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು,ವೀರಗಾಸೆ ನೃತ್ಯ,ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ರವರು ಮಾತನಾಡಿ ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ ಕಂಜನ್, ಏಕಲವ್ಯ,ಭೀಮ,ಲಕ್ಷ್ಮೀ, ವರಲಕ್ಷ್ಮಿ,ರೋಹಿತ್, ಧನಂಜಯ ಹಾಗೂ ಗೋಪಿ ಆನೆಗಳು ಮೈಸೂರಿಗೆ ಆಗಮಿಸಲಿವೆ.ಮೈಸೂರಿನ ಅಶೋಕಪುರದ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿ,ನಂತರ ಆಗಸ್ಟ್ 23 ರಂದು ಅರಮನೆಗೆ ಸ್ವಾಗತ ಮಾಡಿ ಆನೆಗಳನ್ನು ಬರಮಾಡಿಕೊಳ್ಳುವುದಾಗಿ ತಿಳಿಸಿದರು.

ಆನೆ ಎಂಬುದು ಒಂದು ದೊಡ್ಡ ಸಂದೇಶ ನೀಡುತ್ತದೆ.ಆನೆ ಎಂಬುದು ಕಾಡಿನ ಸಂಪತ್ತು. ವನ್ಯ ಜೀವಿಗಳು ಹಾಗೂ ವನ್ಯ ಸಂರಕ್ಷಣೆ ದೇಶಕ್ಕೆ ಅತ್ಯಗತ್ಯ. ಪರಿಸರ ಸಂರಕ್ಷಣೆ ಹಾಗೂ ವನ್ಯ ಸಂರಕ್ಷಣೆ ಮಾಡದಿದ್ದರೆ ಮಾನವ ಉಳಿಯುವುದು ಕಷ್ಟ. ಈ ವರ್ಷ ಮೈಸೂರಿನಲ್ಲಿ 40 ಡಿಗ್ರಿ ವರೆಗೆ ಉಷ್ಣಾಂಶ ಇತ್ತು. ಇದಕ್ಕೆ ಕಾರಣ ಪರಿಸರವನ್ನು ಹಾಳು ಮಾಡುತ್ತಿರುವುದು. ಆದ್ದರಿಂದ ಪರಿಸರವನ್ನು ರಕ್ಷಿಸಲು ಎಲ್ಲರೂ ಪಣತೊಡಬೇಕು ಎಂದು ತಿಳಿಸಿದರು.

ಅರ್ಜುನ ಆನೆ 14 ಬಾರಿ ದಸರಾದಲ್ಲಿ ಭಾಗವಹಿಸಿ,9 ಬಾರಿ ಅಂಬಾರಿ ಹೊತ್ತಿತ್ತು.ಇದು ವೀರ ಮರಣ ಹೊಂದಿತು. ಮಾನವ ಹಾಗೂ ಪ್ರಾಣಿ ಸಂಘರ್ಷ ನಡೆಯಲು ಕಾರಣ ಅರಣ್ಯ ನಾಶ ಮತ್ತು ಒತ್ತುವರಿ ಮಾಡುತ್ತಿರುವುದು ಇದನ್ನು ತಡೆಗಟ್ಟಬೇಕು ಎಂದರು.

ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು ಎಲ್ಲಾ ಜಲಾಶಯ ಗಳು ಭರ್ತಿಯಾಗಿವೆ.ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ.ಅದರಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ ಡಿ ಹರೀಶ್ ಗೌಡ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ,ಪಶು ಸಂಗೋಪನೆ ಹಾಗೂ ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್,ಅರಣ್ಯ ವಸತಿ ಧಾಮಗಳ ಅಧ್ಯಕ್ಷರು ಹಾಗೂ ಹೆಚ್ ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು,ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುನಿಲ್ ಬೋಸ್,ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್,ಕೆ.ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ರವಿಶಂಕರ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಎಂ.ಗಾಯತ್ರಿ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ದೊಡ್ಡ ಹೆಜ್ಜುರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಂಬಿಕಾ,ಮುಡಾ ಅಧ್ಯಕ್ಷರಾದ ಕೆ.ಮರೀಗೌಡ,ರವರು ಸೇರಿದಂತೆ ಮತ್ತಿತರರು ಉಪಸ್ಥಿತರಿದರು...
ಮೈಸೂರು ದಸರಾ,ಗಜ ಪಯಣ,ಸಾ ರಾ ಮಹೇಶ್,ನಾಗರಹೊಳೆ ಅರಣ್ಯ,tv9 kannada,tv9 kannada news,tv9 kannada live,gajapayana,mysuru dasara 2024,dasara elephants,nagarahole,gajapayana of mysuru dasara jumbos,nagarahole tiger reserve,veeranahosahalli gate,tv9kannada,kannada news,latest news,tv9kannada digital,karnataka news,tv9digital,tv9youtube,mysuru dasara,dasara inauguration,cm bommai,dasara festival,navaratri,jambu savari,vijaya dasami,jamboo savari
Please
Share || like || comment

👉This video entrainment and channel promotion purpose only...👈


Please Watch the video Till the end and keep the support

Please share the video and comment on your favourite song to make a new WhatsApp video...

Please click the red button to subscribe and support...
📞 8553561200

ನಮಸ್ಕಾರ ಸ್ನೇಹಿತರೆ, ನಮ್ಮ ಯುಟ್ಯೂಬ್ ಚಾನೆಲ್ನಲ್ಲಿ ದೈನಂದಿನ ನಡೆಯುವ ಘಟನೆಗಳು ವಿಶೇಷ ಸಮಾಚಾರದ ಬಗೆಗಿನ ನ್ಯೂಸ್ ಅನ್ನು ನಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ಪ್ರಸಾರವಾಗುವುದು
ಸಿನಿಮಾ,ಆಲ್ಬಂ ಸಾಂಗ್,ಮನೋರಂಜನೆಗೆ ಸಂಭಂದಿಸಿದ ವಿಡಿಯೋ ಹಾಗೂ ಅನುಭವಿ ವ್ಯಕ್ತಿಗಳ ಸಂದರ್ಶನಗಳ ಸಂಬಂಧಪಟ್ಟಂತಹ ಪ್ರತಿ ವಿಷಯಗಳನ್ನು ನಮ್ಮ ಚಾನಲ್ ನಲ್ಲಿ ಪ್ರಸಾರ ಮಾಡಲಾಗುವುದು ಧನ್ಯವಾದಗಳು🙏
Hello friends, daily happenings on our youtube channel news about special news broadcast on our youtube channel.
Thank you to those who have broadcasted on our channel everything related to movies, album songs, entertainment related videos and interviews of experienced people.
My Electronic Media Channel-   / @nikhiltejaswini1667  

show more

Share/Embed